ಅಮೋಘ ಸೌಂದರ್ಯದ ಗಣಿಯಾದ ಮಲೆನಾಡಿನ ಮಳೆಗಾಲ ಸಂಭ್ರಮ ಮತ್ತು ಸಾಹಸದ ಮಿಶ್ರಣ. ಈ ಭಾಗದಲ್ಲಿ ಹುಟ್ಟಿದ ಮಕ್ಕಳಿಗೆ ಸಿಕ್ಕಂಥ ಬಾಲ್ಯ, ಪ್ರಕೃತಿಯೇ ಕಲಿಸಿದ ಜೀವನ ಪಾಠ ಬೆಲೆಕಟ್ಟಲಾರದ ಸಂಪತ್ತು! ಪ್ರತಿ ಮಳೆಗಾಲ ಬಂದಾಗಲೂ ಬಾಲ್ಯದ ನೆನಪುಗಳ ನವಿಲುಗರಿ ಮರಿಹಾಕಿದಂತನ್ನಿಸುತ್ತೆ. ವಿದ್ಯೆ, ಕೆಲಸ, ಮದುವೆ... ಎನ್ನುತ್ತ ಮಲೆನಾಡನ್ನು ಬಿಟ್ಟು ಬದುಕಿನ ಅನಿವಾರ್ಯತೆಗೆ ಹೊಂದಿಕೊಳ್ಳಬೇಕಾದಲೂ ನಮ್ಮೊಂದಿಗುಳಿದಿದ್ದು ಬಾಲ್ಯದ ಮಧುರ ನೆನಪುಗಳೊಂದೇ.
ನಿಜ, ಈ ಮಲೆನಾಡ ಮಳೆ ಭುವಿಗೆ ಬೀಳೋ ಹೊತ್ತು, ಮಣ್ಣಿನ ಪರಿಮಳ ತಂದ ಮತ್ತು, ಜಿಟಿ ಜಿಟಿ ಮಳೆ ಇತ್ತ ನೆನಪಿನ ಮುತ್ತು... ಈ ಸಂಭ್ರಮ ಅನುಭವಿಸಿದವರಿಗೇ ಗೊತ್ತು..!

No comments:
Post a Comment